
By ETF Desk
ಬ್ರಹ್ಮಾವರದಲ್ಲಿ ಕಾರ್ಯಾಚರಿಸುತ್ತಿದ್ದ ಸಂಚಾರಿ ನ್ಯಾಯಾಲಯವನ್ನು ಪೂರ್ಣ ಪ್ರಮಾಣದ ನ್ಯಾಯಾಲಯವಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಇದರಿಂದ ಕೋಟ ಮತ್ತು ಬ್ರಹ್ಮಾವರ ವ್ಯಾಪ್ತಿಯ 52 ಗ್ರಾಮಗಳ ಸುಮಾರು 2.5 ಲಕ್ಷ ಜನರಿಗೆ ಅನುಕೂಲವಾಗಲಿದ್ದು, ಪ್ರಕರಣಗಳು ತ್ವರಿತವಾಗಿ ಇತ್ಯರ್ಥವಾಗಲಿವೆ. ನೂತನ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಾಗ ಹಾಗೂ 22 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.